ಚಿಕ್ಕಮಗಳೂರಿನ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಯುವಕನ ವಿರುದ್ಧ ದೂರು ದಾಖಲಿಸಿದ ಯುವತಿ…

114
firstsuddi

ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಸದ್ಯ ವಿದೇಶದಲ್ಲಿರುವ ರೌಫ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನ ಡಿಲೀಟ್ ಮಾಡಿಸಿ ಮೊಹಮದ್ ರೌಫ್, ಇರ್ಫಾನ್ ಹಾಗೂ ಸೈಫ್ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವತಿ ಮನವಿ ಮಾಡಿದ್ದಾಳೆ.

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಹೋದರಿಯ ಫೋಟೋ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ರೋಫ್ ವಿರುದ್ಧ ಯುವತಿ ಸೋದರ ದೂರು ದಾಖಲಿಸಿದ್ದರು. ಈ ಸಂಬಂಧ ರೋಫ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.