ಚಿಕ್ಕಮಗಳೂರು:ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ :ಸಿ.ಟಿ. ರವಿ

324
ಚಿಕ್ಕಮಗಳೂರು  : ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಬಹುತೇಕ ಸಾಧ್ಯತೆಗಳಿವೆ. ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ಇರುವುದರಿಂದ ಸಿಎಂಗೆ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ ವಿಸ್ತರಣೆ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ. ಟಿ. ರವಿ ಹೇಳಿದ್ದಾರೆ. ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ಮಾತನಾಡಿದ ಅವರು, ಮುಖ್ಯ ಮಂತ್ರಿ  ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. ಪುನರ್ ರಚನೆ ಅಥವ ವಿಸ್ತರಣೆಯೇ ಎಂಬುದು ವರಿಷ್ಠರ ಜೊತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುತ್ತಾರೆ, ಜೊತೆಗೆ ಶೀಘ್ರದಲ್ಲೇ ಚಿಕ್ಕಮಗಳೂರಿಗೆ ಉಸ್ತುವಾರಿ ಸಚಿವರು ಬರ್ತಾರೆ ಎಂದರು. ಬಿಹಾರದಲ್ಲಿ ನಾಲ್ಕನೇ ಬಾರಿಗೆ ನಿತಿಶ್ ಕುಮಾರ್ ಸರ್ಕಾರ ಜನಮನ್ನಣೆ ಗಳಿಸಿಕೊಳ್ಳೊದು ಅಷ್ಟು ಸುಲಭವಲ್ಲ. ಅವರು ಅದನ್ನ ಸಾಧಿಸಿದ್ದಾರೆ. ಪ್ರಧಾನಿ ಹಾಗೂ ನಿತಿಶ್ ಕುಮಾರ್ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದಿದೆ. ಬಿಹಾರ ಜನರ ಕನಸನ್ನ ನನಸು ಮಾಡಲು ಶಕ್ತಿ ತುಂಬುವಂತಹಾ ಕೆಲಸವನ್ನ ಎನ್.ಡಿ.ಎ ಮಾಡುತ್ತೆ ಎಂದರು. ಮೂರು ರಾಜ್ಯಗಳ ಉಸ್ತುವಾರಿ ಕುರಿತಂತೆ ಪಕ್ಷ ಕೊಡುವ ಜವಾಬ್ದಾರಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ ಎಂದರು. 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಸಂಭ್ರಮ ನೆಲೆಸಿದೆ. ಯೋಗಿ ಆದಿತ್ಯಾನಾಥ್ ನೇತೃತ್ವದ್ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ. ಜಗತ್ತಿನ ಜನ ಸಂಭ್ರಮಿಸಿದ್ದಾರೆ. ಇದೊಂದು ಶುಭ ಸಂಕೇತ. ಆಯೋಧ್ಯೆಯಲ್ಲಿ ಮತ್ತೆ ವೈಭವ ಮರುಕಳಿಸಲಿದೆ ಎಂದರು.