ಚಿಕ್ಕಮಗಳೂರು : ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯಿತಿಗೆ ಒತ್ತಾಯ…

92
firstsuddi

ಚಿಕ್ಕಮಗಳೂರು : ನಗರದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕ ಪತ್ರ ವಿಭಾಗದ ಅಧೀಕ್ಷಕರು ಮಾಡಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾ ಪಂಚಾಯಿತಿಯನ್ನು ಒತ್ತಾಯಿಸಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರನ್ನು ಇಂದು ಭೇಟಿ ಮಾಡಿದ ಮಹಾಸಭಾದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಅಕೌಂಟ್ ಸೂಪರಿಟೆಂಡೆಂಟ್ ಆಗಿರುವ ನಟರಾಜ್ ಎಂಬುವವರು ಈಗಾಗಲೇ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಶೃಂಗೇರಿ ತಾಲ್ಲೂಕು ಸಹಾಯಕ ನಿರ್ದೇಶಕರ ಹುದ್ದೆಗೆ ಮುಂಬಡ್ತಿ ನೀಡಿದ್ದರೂ ಸಹ ಪುನಃ ನಿಯೋಜನೆ ಮೇಲೆ ಇಲ್ಲೇ ಉಳಿದು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಟರಾಜ್ ಅವರ ಮೇಲೆ ಹಲವಾರು ಅವ್ಯವಹಾರಗಳ ಆರೋಪವಿರುವುದರಿಂದಾಗಿ ಅದರ ಬಗ್ಗೆ ಸಮಗ್ರ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಬಿ.ಎಂ.ರಘು, ಉಪಾಧ್ಯಕ್ಷ ನಂಜುಂಡಪ್ಪ, ತರೀಕೆರೆ ತಾಲ್ಲೂಕು ಅಧ್ಯಕ್ಷ ಸ್ವಾಮಿ, ನಾಗೇಶ್, ಸಂದೀಪ್ ಹಾಜರಿದ್ದರು.