ಚಿಕ್ಕಮಗಳೂರು : ನಗರದ ಆಜಾದ್ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಂದು ವಿಶ್ವ ಪರಿಸರ ದಿನವನ್ನು ಆಚರಿಸಿ ದರು.
ಪರಿಸರ ದಿನದ ಪ್ರಯುಕ್ತ ಶಾಲೆಯ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಈ ವೇಳೆ ಮಾತನಾಡಿದ ಮುಖ್ಯ ಶಿಕ್ಷಕ ಎಸ್.ಇ. ಲೋಕೇಶ್ವರಾಚಾರ್ ಮಿತಿ ಮೀರಿದ ದುರಾಸೆಯಿಂದಾಗಿ ಕಾಡು ಮತ್ತು ಬೆಟ್ಟ ಗುಡ್ಡಗಳನ್ನು ಕಡಿದು ಪ್ರಕೃತಿಯನ್ನು ನಾವೇ ನಾಶ ಮಾಡಿದ್ದೆವೆ ಎಂದು ವಿಷಾಧಿಸಿದರು.
ನಮ್ಮಿಂದ ಹಾಳಾದ ಪರಿಸರವನ್ನು ನಾವೇ ಉಳಿಸಿ ಹಸಿರನ್ನು ಬೆಳೆಸಬೇಕು. ಆ ಮೂಲಕ ಮುಂದಿನ ಪೀಳಿಗೆ ನೆಮ್ಮದಿಯಿಂದ ಬದುಕಲು ಅನುವು ಮಾಡಿಕೊಡಬೇಕು ಎಂದು ಕಿವಿಮಾತು ಹೇಳಿದರು.
ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ಶಿಕ್ಷಕರಾದ ನಾಗವೇಣಿ, ಜಯಂತಿ, ಸಾವಿತ್ರಿ ಹಾಜರಿದ್ದರು.










