ಚಿಕ್ಕಮಗಳೂರು : ಉಮಾಮಹೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಕುಮಾರಸ್ವಾಮಿ ಕುಟುಂಬ…

218
firstsuddi

ಚಿಕ್ಕಮಗಳೂರು : ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸೆ ಬಳಿಕ ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕುಡ್ನಳ್ಳಿಯಲ್ಲಿ ಇರುವ ಉಮಾಮಹೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಅಮಾವಾಸ್ಯೆ ದಿನದಂದೇ ಹೋಮ-ಹವನ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದ್ದು, ಶತ್ರುಸಂಹಾರ, ಯಶಸ್ಸು ಹಾಗೂ ಶ್ರೇಯಸ್ಸಿಗಾಗಿ ಪೂಜೆ ಸಲ್ಲಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೇರಿದಂತೆ ಕುಟುಂಬ ಸಮೇತರಾಗಿ ರುದ್ರಹೋಮ ಹಾಗೂ ಗಣಪತಿ ಹೋಮವನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ನಾಳೆ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದ್ದು, ಕೊಪ್ಪ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತ ರಂಗನಾಥ್ ಎಂಬುವವರ ಗುಡ್ಡೇತೋಟ ಎಸ್ಟೇಟ್‍ನಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದು ಬಂದಿದೆ.