ಚಿಕ್ಕಮಗಳೂರು : ಐತಿಹಾಸಿಕ ಅಯ್ಯನಕೆರೆಗೆ ಬಾಗಿನ ಅರ್ಪಿಸಿದ ಸಿ.ಟಿ. ರವಿ…

146
firstsuddi

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲ್ಲೂಕಿನ ಐತಿಹಾಸಿಕ ಅಯ್ಯನಕೆರೆ ತುಂಬಿದ ಹಿನ್ನೆಲೆ, ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಅಯ್ಯನಕೆರೆಗೆ ಬಾಗಿನ ಅರ್ಪಿಸಿದರು. ಬಯಲುಸೀಮೆಯ ರೈತರ ಜೀವನಾಡಿಯಾಗಿರುವ ಅಯ್ಯನಕೆರೆಯನ್ನು ಐದು ಸಾವಿರಕ್ಕೂ ಹೆಚ್ಚು ರೈತ ಕುಟುಂಬಗಳನ್ನು ನಂಬಿ ಬದುಕುತಿದ್ದು, ಪ್ರತಿವರ್ಷ ಇದೇ ರೀತಿಯಲ್ಲಿ ಮಳೆ ಕರುಣಿಸುವಂತೆ ಸಿ.ಟಿ. ರವಿ ಅವರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಗಂಗಾಪೂಜೆ ಮಾಡಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರಿಗೆ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮುರುಡಪ್ಪ, ಕಡೂರು ತಹಾಸೀಲ್ದಾರರು ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.