ಚಿಕ್ಕಮಗಳೂರು : ಐತಿಹಾಸಿಕ ಅಯೋಧ್ಯೆ ತೀರ್ಪು ಹೊರಬಂದ ಹಿನ್ನೆಲೆ, ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶ್ರೀರಾಮನ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್, ಮಾಜಿ ಸಚಿವ ಡಿ.ಎಸ್. ಜೀವರಾಜ್ ಸೇರಿ 50ಕ್ಕೂ ಹೆಚ್ಚು ಕಾರ್ಯಕರ್ತರು ಪೂಜೆ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಜೀವರಾಜ್, ಎಲ್ಲಾ ಜನರಿಗೆ ಸಂತಸ ತಂದಿರುವಂತಹ ತೀರ್ಪು ಇದು. ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿದೆ. ಈ ತೀರ್ಪು ದೇಶದ ಪ್ರತಿಯೊಬ್ಬರಿಗೂ ತಂದಿರುವ ಗೌರವ-ನೆಮ್ಮದಿ ಎಂದರು. ಇಂದಿನ ತೀರ್ಪನ್ನು ಸ್ವಾಗತಿಸಿದ ಇವರು, ಶೀಘ್ರವೇ ರಾಮನ ಮಂದಿರ ನಿರ್ಮಾಣವಾಗಲೆಂದು ಶ್ರೀರಾಮನಲ್ಲಿ ಪ್ರಾರ್ಥಿಸಿದ್ದೇವೆ. ನ್ಯಾಯ ಸಿಗುತ್ತದೆ ಎಂದು ನಂಬಿಕೆ ಇತ್ತು. ಇದು ಸತ್ಯಕ್ಕೆ ಸಂದ ಜಯ ಎಂದು ಸಂತಸ ವ್ಯಕ್ತಪಡಿಸಿದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ, ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು…









