ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಬಲಿ…

38
firstsuddi

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕನೋರ್ವ ಬಲಿಯಾಗಿರುವಂತಹ ಘಟನೆ ತಾಲೂಕಿನ ಕೆಂಚೇನಹಳ್ಳಿಯಲ್ಲಿ ನಡೆದಿದೆ.

ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕ ಶ್ರೀಧರ್ ಎಂಬುವವರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಇನ್ನು ಮೃತ ಕಾರ್ಮಿಕ ಶ್ರೀಧರ್, ತಮಿಳುನಾಡು ಮೂಲದವನಾಗಿದ್ದು, ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಮೇತ ಬಂದಿದ್ದ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಜಿಲ್ಲೆಯ ಕೆ.ಆರ್.ಪೇಟೆ ಹಾಗೂ ಕೆಂಚೇನಹಳ್ಳಿ ಸುತ್ತಮುತ್ತ ಒಂಟಿ ಸಲಗ ಓಡಾಡುತ್ತಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.