ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಜಿಲ್ಲೆಯ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಆ ಕಡೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










