ಚಿಕ್ಕಮಗಳೂರು : ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಗೆದ್ದ ಇಬ್ಬರು ಮಕ್ಕಳು-ಆಸ್ಪತ್ರೆಯಿಂದ ಬಿಡುಗಡೆ…

201
firstsuddi

ಚಿಕ್ಕಮಗಳೂರು : ವಿಶ್ವಧಾದ್ಯಂತ ರಣಕೇಕೆ ಹಾಕುತ್ತಿರುವ ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಿ ಜಿಲ್ಲೆಯ 7 ವರ್ಷದ ಇಬ್ಬರು ಮಕ್ಕಳು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಇಬ್ಬರು ಮಕ್ಕಳು ಸೋಂಕಿನಿಂದ ಗುಣಮುಖರಾಗಿದ್ದಾರೆ. ಮುಂಬೈನಿಂದ ಆಗಮಿಸಿ ಕೊಪ್ಪದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕ್ವಾರಂಟೈನ್‍ನಲ್ಲಿದ್ದ ಈ ಮಕ್ಕಳಿಗೆ ಮೇ.19 ಹಾಗೂ 22ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಕೂಡಲೇ ಅವರನ್ನು ಚಿಕ್ಕಮಗಳೂರಿನ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 8-10 ದಿನಗಳಿಂದ ನಿರಂತರ ಚಿಕಿತ್ಸೆ ನೀಡಿದ ಬಳಿಕ ಇಬ್ಬರು ಮಕ್ಕಳು ಸೋಂಕಿನಿಂದ ಗುಣಮುಖರಾಗಿದ್ದು, ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 14 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.