ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಯುವಕನೋರ್ವನಿಗೆ ಅನ್ಯಕೋಮಿನ ಗುಂಪೊಂದು ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಪಟ್ಟಣದ ಸಿಪಿಸಿ ಕಾಲೋನಿಯ ಮಂಜುನಾಥ್ರವರ ಪುತ್ರ ವಿಘ್ನೇಶ್ ಎಂಬುವರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಯುವಕ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










