ಚಿಕ್ಕಮಗಳೂರು : ಖ್ಯಾತ ಸ್ಯಾಕ್ಸೋಫೋನ್ ವಾದಕ ವಿದ್ವಾನ್ ಡಾ|| ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಸಾಂಸ್ಕೃತಿಕ ಸಂಘ ಸಂತಾಪ…

257
firstsuddi

ಚಿಕ್ಕಮಗಳೂರು : ಖ್ಯಾತ ಸ್ಯಾಕ್ಸೋಫೋನ್ ವಾದಕ ವಿದ್ವಾನ್ ಡಾ|| ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಸಾಂಸ್ಕೃತಿಕ ಸಂಘ ತೀವ್ರ ಸಂತಾಪ ಸೂಚಿಸಿದೆ. ದೇಶದ ಪ್ರತಿಷ್ಠಿತ ಪದ್ಮಶ್ರೀ, ಸ್ಯಾಕ್ಸೋಫೋನ್ ಚಕ್ರವರ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಪಾತ್ರರಾಗಿದ್ದ, ಸರಳ ಸಜ್ಜನಿಕೆಗೆ ಹೆಸರಾಗಿದ್ದ ಡಾ|| ಕದ್ರಿ ಗೋಪಾಲನಾಥ್ ಅವರು ಕೇವಲ ಮದುವೆ ಮನೆಗಷ್ಟೇ ಸೀಮಿತವಾಗಿದ್ದ ಸ್ಯಾಕ್ಸೋಫೋನ್ ವಾದ್ಯಕ್ಕೆ ತಮ್ಮ ವಾದನದ ಮೂಲಕ ಅಂತರಾಷ್ಟ್ರೀಯ ಮನ್ನಣೆ ಗಳಿಸಿಕೊಟ್ಟಿದ್ದರು ಎಂದಿರುವ ಸಂಘದ ಕಾರ್ಯದರ್ಶಿ ಉಜ್ವಲ್ ಡಿ.ಪಡುಬಿದ್ರಿ ಕದ್ರಿಯವರ ನಿಧನದಿಂದಾಗಿ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಶೋಕಿಸಿದ್ದಾರೆ.