ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್(30) ಹಾಗೂ ರಾಜ್(28) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ರಾಜ್ಯದಲ್ಲಿ ಲಾಕ್‍ಡೌನ್ ಸಡಿಲವಾಗಿರುವ ಹಿನ್ನೆಲೆಯಲ್ಲಿ ಸ್ನೇಹಿತರೆಲ್ಲರೂ ಧರ್ಮಸ್ಥಳಕ್ಕೆ ಹೊರಟಿದ್ದರು. ಈ ವೇಳೆ ತಾಲ್ಲೂಕಿನ ಕರ್ತಿಕೆರೆ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ರಸ್ತೆಗೆ ಉಜ್ಜಿಕೊಂಡು ಹೋಗಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಧರ್ಮಸ್ಥಳಕ್ಕೆ ಹೊರಟಿದ್ದ ಇಬ್ಬರು ಸ್ಥಳದಲ್ಲೇ ಸಾವು…