ಚಿಕ್ಕಮಗಳೂರು : ಜಾತಿ, ಮತ, ಧರ್ಮಗಳ ಭೇದವಿಲ್ಲದೆ ದೇಶದ ಪ್ರತಿಯೊಬ್ಬ ನಾಗರೀಕರೂ ರಾಷ್ಟ್ರಧ್ವಜವನ್ನು ಗೌರವಿಸಬೇಕು : ಬಸವರಾಜ್ ಚೇಂಗಟಿ…

384
firstsuddi

ಚಿಕ್ಕಮಗಳೂರು : ಜಾತಿ, ಮತ, ಧರ್ಮಗಳ ಭೇದವಿಲ್ಲದೆ ದೇಶದ ಪ್ರತಿಯೊಬ್ಬ ನಾಗರೀಕರೂ ರಾಷ್ಟ್ರಧ್ವಜವನ್ನು ಗೌರವಿಸಬೇಕು ಎಂದು ಹಿರಿಯ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಸಲಹೆ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಇಸ್ಲಾಮಿಯ ಬೈತುಲ್ ಮಾಲ್ ಸಂಸ್ಥೆ ನಗರದ ಐ.ಜಿ. ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರಧ್ವಜ ರಾಷ್ಟ್ರೀಯತೆಯ ಸಂಕೇತ, ಅದು ರಾಷ್ಟ್ರೀಯತೆಯನ್ನು ಬಿಂಬಿಸುತ್ತದೆ ಅದನ್ನು ಗೌರವಿಸದಿದ್ದರೆ ಅಥವಾ ಅದಕ್ಕೆ ಅಪಮಾನ ಮಾಡಿದರೆ ಕನಿಷ್ಠ ಮೂರು ವರ್ಷ ಕಾರಾಗೃಹ ವಾಸ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಂವಿಧಾನ ಅನೇಕ ಕಾನೂನುಗಳನ್ನು ರಚಿಸಿದೆ ಅವುಗಳನ್ನು ಮಕ್ಕಳು ಅರಿಯಬೇಕು ಹಾಗಾದಾಗ ಮಾತ್ರ ಅವರು ಸುರಕ್ಷಿತವಾಗಿರಲು ಸಾಧ್ಯವಾಗುತ್ತದೆ ಎಂದರು.
ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾದಲ್ಲಿ ತಕ್ಷಣ 1098 ಸಹಾಯ ವಾಣಿಗೆ ಕರೆ ಮಾಡಬೇಕು, ಶಾಲೆಯಲ್ಲಿ ಸಹಾಯ ವಾಣಿಯ ನಾಮಫಲಕವನ್ನು ಅಳವಡಿಸಬೇಕು ಎಂದು ಸೂಚಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ನಸ್ರುಲ್ಲಾ ಷರೀಫ್ ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮತ್ತು ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ನ್ಯಾಯವಾದಿಗಳಾದ ಕೆ.ಎನ್.ಚಂದ್ರಶೇಖರ್ ಬಾಲ್ಯ ವಿವಾಹ ಕಾಯ್ದೆ ಹಾಗೂ ಬಿ.ಎನ್.ಅಶ್ವಿನಿ ಮಕ್ಕಳ ಸಹಾಯ ವಾಣಿ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ವೆಂಕಟೇಶ್, ಇಸ್ಲಾಮಿಯ ಬೈತುಲ್ ಮಾಲ್ ಸಂಸ್ಥೆಯ ಅಧ್ಯಕ್ಷ ನಜೀರ್ ಅಹಮದ್, ಮುಖ್ಯ ಶಿಕ್ಷಕಿ ಶಹಾದಿ ಬಿ, ಶಾಲಾಭಿವೃದ್ದಿ ಸಮಿತಿ ಸದಸ್ಯ ಬಿ.ಅಮ್ಜದ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಜಗಧೀಶಾಚಾರ್ ಉಪಸ್ಥಿತರಿದ್ದರು.
ಶಿಕ್ಷಕರಾದ ಎಸ್.ಎಂ.ಮಹೇಶಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು, ತಂಜೀಮ್ ಸ್ವಾಗತಿಸಿದರು, ಕಾವ್ಯ ವಂದಿಸಿದರು.