ಚಿಕ್ಕಮಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು…

308
firstsuddi

ಚಿಕ್ಕಮಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಹಾವು ಕಾಣಿಸಿಕೊಂಡಿದ್ದು, ಹಾವನ್ನು ಕಂಡು ಸಿಬ್ಬಂದಿ ಗಾಬರಿಗೊಂಡಿದ್ದಾರೆ. ಇಂದು 2ನೇ ಶನಿವಾರ ರಜೆ ಇದ್ದರೂ ಕೆಲ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ವೇಳೆ ರೆಕಾರ್ಡ್ ರೂಂನಲ್ಲಿ ಕೆರೆ ಹಾವು ಕಾಣಿಸಿಕೊಂಡಿದ್ದು, ಕೂಡಲೇ ಉರಗತಜ್ಞ ಸ್ನೇಕ್ ನರೇಶ್ ಅವರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ವಿಷಯ ತಿಳಿದ ಸ್ನೇಕ್ ನರೇಶ್ ಅವರು ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಹಾವನ್ನು ಸೆರೆ ಹಿಡಿದಿದ್ದು, ಗಾಬರಿಯಾಗಿದ್ದ ಸಿಬ್ಬಂದಿಗೆ ಅರಿವನ್ನು ಮೂಡಿಸಿದರು.