ಚಿಕ್ಕಮಗಳೂರು : ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾಗಿ ಪ್ರಕಾಶ್ ನೇಮಕಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಂತ್, ಶಾಸಕ ಟಿ.ಡಿ ರಾಜೇಗೌಡ, ಗಾಯಿತ್ರಿ ಶಾಂತೇಗೌಡ, ಮೋಟಮ್ಮ, ಎಂ.ಎಲ್ ಮೂರ್ತಿ ಅವರ ಶಿಫಾರಸ್ಸಿನಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಿಸಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಅವರು ನೇಮಕಗೊಳಿಸಿ ಆದೇಶಿಸಿದ್ದಾರೆ.
ಅರೇನಹಳ್ಳಿ ಪ್ರಕಾಶ್ ಅವರು ಮೂಡಿಗೆರೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಎಪಿಎಂಸಿ ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಅವರಿಗೆ ಕಾಂಗ್ರೆಸ್ ಯುವ ಮುಖಂಡರಾದ ನಯನ ಮೋಟಮ್ಮ, ಡಾ|| ವಿಜಯ್ಕುಮಾರ್, ಅನಂತ್, ಮೂಡಿಗೆರೆ ಯುವಮೋರ್ಚ ಅಧ್ಯಕ್ಷ ದೀಕ್ಷಿತ್ ಕಣಚೂರು ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಶುಭ ಕೋರಿದ್ದಾರೆ.










