ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 111 ಮಂದಿಗೆ ಕೊರೊನಾ ಪಾಸಿಟಿವ್…

228
firstsuddi

ಚಿಕ್ಕಮಗಳುರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇಂದು ಜಿಲ್ಲೆಯಲ್ಲಿ 111 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,622ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಚಿಕ್ಕಮಗಳೂರು-43, ಕಡೂರು-31, ತರೀಕೆರೆ-14, ಅಜ್ಜಂಪುರ-10, ಮೂಡಿಗೆರೆ-8, ಎನ್.ಆರ್. ಪುರ ಹಾಗೂ ಕೊಪ್ಪ-2, ಶೃಂಗೇರಿ-1 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಸೋಂಕಿಗೆ ಬಲಿಯಾಗಿದ್ದು, ಸೋಂಕಿತರ ಪೈಕಿ 1663 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.