ಚಿಕ್ಕಮಗಳೂರು : ನಗರದ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕೊರೊನಾ ಪಾಸಿಟಿವ್…!

263
firstsuddi

ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಇಂದು 3 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. 3 ಮಂದಿ ಸೋಂಕಿತರ ಪೈಕಿ ಬೆಂಗಳೂರಿಗೆ ಹೋಗಿ ಬಂದಿದ್ದ ಮಲ್ಲೆದೇವರಹಳ್ಳಿಯ ಓರ್ವ ವ್ಯಕ್ತಿ ಮತ್ತು ಕಡೂರು ತಾಲ್ಲೂಕಿನ ಚೌಳಹಿರಿಯೂರಿನ ಕೆ.ಎಸ್.ಆರ್.ಸಿ ಬಸ್ ಕಂಡಕ್ಟರ್ ಗೂ ಸೋಂಕು ತಗುಲಿರುವುದು ದೃಢವಾಗಿದೆ. ಆತಂಕಕಾರಿ ವಿಷಯವೆಂದರೆ ನಗರದ ಖಾಸಗಿ ಆಸ್ಪತ್ರೆಯ ಫಿಜಿಶಿಯನ್ ಗೆ ಸೋಂಕು ತಗುಲಿರುವುದು ದೃಢವಾಗಿದ್ದು, ನಗರದಲ್ಲಿ ಆತಂಕ ಹೆಚ್ಚಾಗಿದೆ. ವೈದ್ಯ ಇತ್ತೀಚೆಗೆ ಬೆಂಗಳೂರಿಗೆ ತೆರಳಿ ನಗರಕ್ಕೆ ವಾಪಸ್ಸಾಗಿದ್ದರು ಎಂದು ತಿಳಿದು ಬಂದಿದ್ದು, ಸದ್ಯ ವೈದ್ಯ ಕೆಲಸ ನಿರ್ವಹಿಸುತ್ತಿದ್ದ ಖಾಸಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಅಲ್ಲದೇ ವೈದ್ಯರ ಸಂಪರ್ಕದಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿಗಳನ್ನು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮಾಹಿತಿ ನೀಡಿದ್ದಾರೆ.