ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಎಸ್. ಕೀರ್ತನಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೂತನ ಸಿಇಒ ಆಗಿ ನೇಮಿಸಲಾಗಿದೆ.
2024ರ ಜುಲೈ 10ರಂದು ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದ ಕೀರ್ತನಾ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ಈ ಹಿಂದೆ ಮಂಗಳೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೀನಾಕ್ಷಿ ಆರ್ಯ ಅವರು ಇದೀಗ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.










