ಚಿಕ್ಕಮಗಳೂರು : ಡಾ|| ಬಿ.ಆರ್.ಅಂಬೇಡ್ಕರ್ ಕೇವಲ ದಲಿತ ವರ್ಗಕ್ಕೆ ಮಾತ್ರ ಸೀಮಿತವಲ್ಲ, ಎಲ್ಲಾ ಸಮುದಾಯಗಳಿಗೂ ನಾಯಕರು : ಕೆ.ಟಿ.ರಾಧಾಕೃಷ್ಣ.

160
firstsuddi

ಚಿಕ್ಕಮಗಳೂರು : ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಕೇವಲ ದಲಿತ ವರ್ಗಕ್ಕೆ ಮಾತ್ರ ಸೀಮಿತವಲ್ಲ ಅವರು ಎಲ್ಲಾ ಸಮುದಾಯಗಳಿಗೂ ನಾಯಕರು ಎಂದು ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.

ನಗರದ ಬಿಎಸ್‍ಪಿ ಕಛೇರಿಯಲ್ಲಿ ಇಂದು ನಡೆದ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರನ್ನು ಕೇವಲ ದಲಿತ ಸಮುದಾಯದ ನಾಯಕರೆಂಬಂತೆ ಬಿಂಬಿಸುವುದು ಸರಿಯಲ್ಲ ಅವರು ತಮ್ಮ ಸಂವಿಧಾನದಲ್ಲಿ ಮಹಿಳೆಯರೂ ಸೇರಿದಂತೆ ಎಲ್ಲಾ ವರ್ಗಗಳಿಗೂ ಮೀಸಲಾತಿ ಮತ್ತು ಬಹಳಷ್ಟು ಹಕ್ಕುಗಳನ್ನು ನೀಡಿದ್ದಾರೆ ಹಾಗಾಗಿ ಸಂವಿಧಾನ ಶಿಲ್ಪಿಯನ್ನು ಎಲ್ಲಾ ಸಮುದಾಯದವರೂ ತಮ್ಮ ನಾಯಕರೆಂದು ಪರಿಗಣಿಸಬೇಕು ಎಂದರು.

ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಮಾತನಾಡಿ ಅಂಬೇಡ್ಕರ್ ಅವರ ತತ್ವ, ಸಿದ್ದಾಂತ ಮತ್ತು ಸಂದೇಶಗಳು ಸಾರ್ವಕಾಲಿಕ ಸತ್ಯಗಳು ಅವುಗಳನ್ನು ಪಾಲಿಸುವುದರಿಂದ ದೇಶದಲ್ಲಿ ಸಮಾನತೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಯಂತಿ ಪ್ರಯುಕ್ತ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು, ಜಿಲ್ಲಾ ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಕಾರ್ಯದರ್ಶಿ ವಸಂತ್, ಕೆ.ಎಸ್.ಮಂಜುಳಾ, ಗಿರೀಶ್, ಸಂತೋಷ್, ಮಂಜುಳಾ ರಾಜ್ ಉಪಸ್ಥಿತರಿದ್ದರು.