ಚಿಕ್ಕಮಗಳೂರು: ಡೆಂಗ್ಯೂಗೆ ಕಾಲೇಜು ವಿದ್ಯಾರ್ಥಿನಿ ಬಲಿ…

54
firstsuddi

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾಳೆ.

ಸಹನಾ ಬಾನು (18) ಮೃತ ವಿದ್ಯಾರ್ಥಿನಿ. ಈಕೆ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಸಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.

ಡೆಂಗ್ಯೂ ಜ್ವರದ ಲಕ್ಷಣಗಳು:
* ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
* ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
* ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
* ಕೆಮ್ಮು, ಗಂಟಲು ಕೆರೆತ ಬರುತ್ತದೆ.
* ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.

ಇನ್ನು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.