ಚಿಕ್ಕಮಗಳೂರು : ತಮಿಳು ಚಿತ್ರನಟ ತಲಪತಿ ವಿಜಯ್ ಅವರ ಹುಟ್ಟುಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ…

246
firstsuddi

ಚಿಕ್ಕಮಗಳೂರು : ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳು ಓದಿಗಷ್ಟೇ ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾ ಸಮಾಜ ಸೇವಾ ಸಂಘದ ಅಧ್ಯಕ್ಷ ಸಿ.ಭರತ್ ಸಲಹೆ ಮಾಡಿದರು.
ತಮಿಳು ಚಿತ್ರನಟ ತಲಪತಿ ವಿಜಯ್ ಅವರ ಹುಟ್ಟುಹಬ್ಬದ ಅಂಗವಾಗಿ ಕೆಂಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವೆಂಬುದು ಬದುಕಿನಲ್ಲಿ ಮಹತ್ವದ ಘಟ್ಟ, ಅಮೂಲ್ಯವಾದ ಅದನ್ನು ಆಟವಾಡುವುದು ಅಥವಾ ಬೇಡದ ಕೆಲಸಗಳನ್ನು ಮಾಡುವ ಮೂಲಕ ಹಾಳು ಮಾಡಿಕೊಳ್ಳಬಾರದು, ಶ್ರದ್ದೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಿ ಶಿಕ್ಷಣವಂತರಾಗಿ ಹೊರಹೊಮ್ಮಬೇಕು ಎಂದು ಕಿವಿಮಾತು ಹೇಳಿದರು.
ಬಡತನದಿಂದ ಹೊರ ಬಂದು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಲು ಶಿಕ್ಷಣದಿಂದ ಮಾತ್ರ ಸಾಧ್ಯ, ವಿದ್ಯಾವಂತರಾಗುವುದರಿಂದ ಸಮಾಜದಲ್ಲಿ ಸ್ಥಾನ ಮಾನ , ಗೌರವ ದೊರೆಯುತ್ತದೆ ಎಂದು ತಿಳಿಸಿದರು.
ತಮಿಳು ಚಿತ್ರನಟ ತಲಪತಿ ವಿಜಯ್ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಂಘದಿಂದ ಸಿಹಿ ವಿತರಿಸಲಾಯಿತು, 95 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಲಾಯಿತು.
ಮುಖ್ಯ ಶಿಕ್ಷಕ ಈರೇಗೌಡ, ಸಮಾಜ ಸೇವಾಸಂಘದ ಜಿಲ್ಲಾ ಉಪಾಧ್ಯಕ್ಷ ಲೋಹಿತ್, ಅನ್ಬು, ಚೆಲ್ವ, ರಾಜ, ಸತೀಶ್ ಉಪಸ್ಥಿತರಿದ್ದರು.

firstsuddi