ಚಿಕ್ಕಮಗಳೂರು : ನಾಳೆಯಿಂದ ಗಿರಿಧಾಮಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ…

96
firstsuddi

ಚಿಕ್ಕಮಗಳೂರು : ಕಾಫಿನಾಡಿನ ಗಿರಿಧಾಮಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿ.17ರಿಂದ 19ರವರೆಗೆ ಮೂರು ದಿನಗಳ ಕಾಲ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದತ್ತ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಡಿ.16ರ ಬೆಳಗ್ಗೆ 6 ಗಂಟೆಯಿಂದ ಡಿ. 20ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ ಐ.ಡಿ ಪೀಠ ಭಾಗಗಳಿಗೆ ನಿರ್ಬಂಧ ಹೇರಲಾಗಿದ್ದು, ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಬುಕ್ ಆಗಿದ್ದರೆ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.