ಚಿಕ್ಕಮಗಳೂರು : ನೀಲಿ ಶಾಲು ಧರಿಸಿ ಹಿಜಾಬ್‍ಗೆ ವಿದ್ಯಾರ್ಥಿಗಳ ಬೆಂಬಲ…

149
firstsuddi

ಚಿಕ್ಕಮಗಳೂರು : ದಿನದಿಂದ ದಿನಕ್ಕೆ ಹಿಜಾಬ್ ವಿವಾದ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ನಗರದ ಐಡಿಎಸ್ ಜಿ ಕಾಲೇಜಿನಲ್ಲಿ ನೀಲಿ ಶಾಲು ಪ್ರತ್ಯಕ್ಷವಾಗಿದೆ.

ಚಿಕ್ಕಮಗಳೂರು ನಗರದಲ್ಲಿ ಹಿಜಬ್‌ಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ ನಡೆದಿದೆ. ಹಿಜಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿದ ಕೆಲ ವಿದ್ಯಾರ್ಥಿಗಳು ಜೈ ಭೀಮ್ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದರು.

ಮೊದಲಿನಿಂದಲೂ ಕಾಲೇಜ್ ನಲ್ಲಿ ಹಿಜಾಬ್ ಸಂಸ್ಕೃತಿ ನಡೆಯುತ್ತಲೇ ಬಂದಿದೆ. ಈಗ ಏಕೆ ಹಿಜಾಬ್ ತಿರಸ್ಕರಿಸಬೇಕು ಎಂಬುದು ನೀಲಿ ಶಾಲಿನ ವಿದ್ಯಾರ್ಥಿಗಳ ವಾದವಾಗಿದೆ. ಈ ನಡುವೆ ನಾಳೆ ಹೈಕೋರ್ಟ್ ನಲ್ಲಿ ಈ ವಿವಾದದ ವಿಚಾರಣೆ ನಡೆಯಲಿದೆ.