ಚಿಕ್ಕಮಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಸಾವಿಗೆ ಶರಣು. 

2106

ಚಿಕ್ಕಮಗಳೂರು : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಎನ್. ಆರ್.ಪುರ ತಾಲೂಕಿನ ಬಿ.ಕಣಬೂರು -ಮಸೀದಿ ಕೆರೆ ಗ್ರಾಮದಲ್ಲಿ ನಡೆದಿದೆ.  ಶಿಲ್ಪಾ ಕೆ.ಎಸ್.(18) ಆತ್ಮಹತ್ಯೆಗೆ ಶರಣಾದ ಯುವತಿ ಎನ್ನಲಾಗಿದ್ದು. ಬಾಳೆಹೊನ್ನೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಶಿಲ್ಪಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ