ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಪತ್ನಿಯ ಶೀಲ ಶಂಕಿಸಿ ಪತಿ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಹಿರೇಖಾನವಂಗಲ ಗ್ರಾಮದಲ್ಲಿ ನಡೆದಿದೆ. ಮಂಜಮ್ಮ(45) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಪತಿ ಗಂಗಾಧರಪ್ಪ ಅವರು ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದರು ಎನ್ನಲಾಗಿದ್ದು, ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










