ಚಿಕ್ಕಮಗಳೂರು : ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ರಾಜ್ಯ ಮಟ್ಟದ ಸಮ್ಮೇಳನವನ್ನು ಜಿಲ್ಲೆಯಲ್ಲಿ ಸದ್ಯದಲ್ಲೇ ನಡೆಸಲಾಗುವುದು : ಡಾ|| ಲೋಕೇಶಪ್ಪ.

145
firstsuddi

ಚಿಕ್ಕಮಗಳೂರು : ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ರಾಜ್ಯ ಮಟ್ಟದ ಸಮ್ಮೇಳನವನ್ನು ಜಿಲ್ಲೆಯಲ್ಲಿ ಸದ್ಯದಲ್ಲೇ ನಡೆಸಲಾಗುವುದು ಎಂದು ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ|| ಲೋಕೇಶಪ್ಪ ಹೇಳಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ದೈಹಿಕ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರು ವೃತ್ತಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು ನಂತರ ಸಮಸ್ಯೆಗಳನ್ನು ಪರಿಹರಿಸುವಂತೆ ಶಿಕ್ಷಣ ಸಚಿವರಿಗೆ ಸಂಘದಿಂದ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಹೋರಾಟ ರೂಪಿಸಲಾಗುವುದು ಎಂದಿರುವ ಅವರು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರಿಗೆ, ಉಳಿದ ಶಿಕ್ಷಕರಿಗೆ ನೀಡುವಂತೆ ಬಡ್ತಿ ಸೇರಿದಂತೆ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ಶಿಕ್ಷಣ ಇಲಾಖೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.