ಚಿಕ್ಕಮಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಬಿ.ಎನ್.ಸುಂದರೇಶ್ ಅವಿರೋಧ ಆಯ್ಕೆ…

234
firstsuddi

ಚಿಕ್ಕಮಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಬಿ.ಎನ್.ಸುಂದರೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಡಿ.ಓಂಕಾರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿಕಟಪೂರ್ವ ಅಧ್ಯಕ್ಷ ಹೆಚ್.ಡಿ.ರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಶಿಕ್ಷಕರ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ನಂತರ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷ ಪುಟ್ಟಪ್ಪ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಚಿತ್ರದುರ್ಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ, ಪ್ರಧಾನ ಕಾರ್ಯದರ್ಶಿ ಮಹಾಂತೇಶ್, ಹಾಸನ ಜಿಲ್ಲಾಧ್ಯಕ್ಷ ದೇವೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ವೈ.ಟಿ.ಚಂದ್ರಪ್ಪ, ಮಾಜಿ ಅಧ್ಯಕ್ಷ ಅಣ್ಣೇಗೌಡ ಉಪಸ್ಥಿತರಿದ್ದರು.