ಚಿಕ್ಕಮಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ…

679

ಚಿಕ್ಕಮಗಳೂರು : ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.