ಚಿಕ್ಕಮಗಳೂರು : ಬೈಕ್ ಸವಾರ ಕೆರೆಗೆ ಬಿದ್ದು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಕೆರೆಯಲ್ಲಿ ನಡೆದಿದೆ. ನವೀನ್(24) ಮೃತ ದುರ್ದೈವಿ. ಮೃತ ನವೀನ್ ಜಾವಗಲ್ ನಿವಾಸಿ ಎನ್ನಲಾಗಿದ್ದು, ನಿನ್ನೆ ರಾತ್ರಿ ಎಸ್. ಬಿದರಹಳ್ಳಿ ಗ್ರಾಮದ ತಮ್ಮ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್‍ನ ಹಿಂಬದಿಯಿದ್ದ ಗುರು ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿದೆ. ಪೊಲೀಸರು ಗುರು ಅವರನ್ನು ವಿಚಾರಣೆ ನಡೆಸುತ್ತಿದ್ದು, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










