ಚಿಕ್ಕಮಗಳೂರು : ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ…

387

ಚಿಕ್ಕಮಗಳೂರು : ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಿಕ್ಕಮಗಳೂರು-ಕಡೂರು ರಾ.ಹೆ. 173ರಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭೂಸ್ವಾಧೀನ ಕಾಯ್ದೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ಪರಿಣಾಮ ನಗರದ ಎ.ಐ.ಟಿ ವೃತ್ತದಲ್ಲಿ ವಾಹನ ಸವಾರರು ಪರದಾಡುವಂತಾಗಿತ್ತು. ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ರೈತ ಸಂಘದ ಮುಖಂಡರಾದ ದುಗ್ಗಪ್ಪ ಗೌಡ, ಬಾಳೆಹಳ್ಳಿ ದಯಾಕರ್ ಸೇರಿದಂತೆ ಇತರೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.