ಚಿಕ್ಕಮಗಳೂರು: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಮಂಗನ ಕಾಯಿಲೆಗೆ ಬಲಿಯಾದ ವೃದ್ಧೆ. ವೃದ್ಧೆಗೆ ಮಂಗನ ಕಾಯಿಲೆ ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ವೃದ್ಧೆಯ ಸಾವಿನಿಂದ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚುತ್ತಿದೆ. ಕೊಪ್ಪ, ಎನ್ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಕಾಯಿಲೆ ಹೆಚ್ಚಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ 11 ಕೆಎಫ್‌ಡಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.










