ಚಿಕ್ಕಮಗಳೂರು : ಮನೆಯ ಸೌಂದರ್ಯಕ್ಕೆ ಅಡ್ಡವಾಗಿದೆ ಎಂದು ಸರ್ಕಾರಿ ಬಸ್ ನಿಲ್ದಾಣವನ್ನೇ ಧ್ವಂಸಗೊಳಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ…

366
firstsuddi

ಚಿಕ್ಕಮಗಳೂರು : ಮನೆಯ ಸೌಂದರ್ಯಕ್ಕೆ ಬಸ್ ನಿಲ್ದಾಣ ಅಡ್ಡವಾಗುತ್ತಿದೆ ಎಂದು ಸರ್ಕಾರಿ ಬಸ್ ನಿಲ್ದಾಣವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಎಸ್. ಬಿದಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಣಮ್ಮ ಹಾಗೂ ಅವರ ಮಕ್ಕಳು ಬಸ್ ನಿಲ್ದಾಣವನ್ನು ಧ್ವಂಸಗೊಳಿಸಿದ್ದಾರೆ. ಅಧ್ಯಕ್ಷೆ ದ್ರಾಕ್ಷಾಯಣಮ್ಮ ಅವರ ಮನೆ ರಸ್ತೆ ಪಕ್ಕದಲ್ಲಿದ್ದು, ಮನೆಯ ಪಕ್ಕದಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಬಸ್ ನಿಲ್ದಾಣ ಮನೆ ಪಕ್ಕದಲ್ಲಿ ಇರುವುದರಿಂದ ಮನೆಯ ಸೌಂದರ್ಯ ಕಾಣುತ್ತಿರಲಿಲ್ಲ ಎಂದು ಅಧ್ಯಕ್ಷೆ ದ್ರಾಕ್ಷಾಯಣಮ್ಮ ಹಾಗೂ ಅವರ ಮಕ್ಕಳಾದ ಪ್ರಭಾಕರ್, ಜಗದೀಶ್ ಎಂಬುವವರು ಜೆಸಿಬಿ ಹಾಗೂ ಟ್ರ್ಯಾಕ್ಟರ್ ಮೂಲಕ ಬಸ್ ನಿಲ್ದಾಣವನ್ನು ನೆಲಸಮಗೊಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ದೂರನ್ನು ನೀಡಿದ್ದಾರೆ.