ಚಿಕ್ಕಮಗಳೂರು : ಮಳೆ ನೀರಿನಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ದಿಢೀರ್ ಪ್ರತ್ಯಕ್ಷ!

104
firstsuddi

ಚಿಕ್ಕಮಗಳೂರು : ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬ ದಿಢೀರ್ ಪ್ರತ್ಯಕ್ಷವಾಗಿರುವ ವಿಚಿತ್ರ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

ಜುಲೈ 12 ರಂದು ನಗರದ ಉಂಡೇ ದಾಸರಹಳ್ಳಿ ರಾಜಕಾಲುವೆಯಲ್ಲಿ ಸುರೇಶ್ ಎಂಬುವವರು ಕೊಚ್ಚಿ ಹೋಗಿದ್ದರು. ರಣ ಮಳೆ ಮಧ್ಯೆಯೂ ಕೊಚ್ಚಿ ಹೋದ ಸುರೇಶ್ ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಶೋಧ ಕಾರ್ಯ ನಡೆಸಿ ಸುಸ್ತಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.

ಇದೀಗ ಘಟನೆ ನಡೆದು 14 ದಿನಗಳ ಬಳಿಕ ಸುರೇಶ್ ದಿಢೀರ್ ಪ್ರತ್ಯಕ್ಷವಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಪಡಿಸಿದ್ದಾರೆ. ರಸ್ತೆಯಲ್ಲಿ ಬಿಂದಾಸ್ ಆಗಿ ಓಡಾತ್ತಿದ್ದು, ಸುರೇಶ್ ಓಡಾಟ ಕಂಡು ಸ್ಥಳೀಯರು, ಅಧಿಕಾರಿಗಳು ಶಾಕ್ ಆಗಿದ್ದಾರೆ. ಅಲ್ಲದೆ ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಅವರು ಸುರೇಶ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಸತ್ತಿದ್ದಾನೆಂದು ತಿಳಿದಿದ್ದ ವ್ಯಕ್ತಿ ಇದೀಗ ಬದುಕಿ ಬಂದಿರುವುದಕ್ಕೆ ಆತನ ಕುಟುಂಬಸ್ಥರು ಮತ್ತು ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.