ಚಿಕ್ಕಮಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಕೊರೊನಾ ವಾರಿಯರ್ ಬಲಿ…

220
firstsuddi

ಚಿಕ್ಕಮಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಕೊರೊನಾ ವಾರಿಯರ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಎನ್.ಆರ್. ಪುರದಲ್ಲಿ ನಡೆದಿದೆ. ಧನಲಕ್ಷ್ಮಿ(53) ಸೋಂಕಿಗೆ ಬಲಿಯಾದ ವಾರಿಯರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಎನ್.ಆರ್. ಪುರದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಧನಲಕ್ಷ್ಮಿ ಅವರಿಗೆ ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಬದಲಾವಣೆ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಅವರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಕೊರೊನಾ ಸೋಂಕಿಗೆ ಬಲಿಯಾದ ಮೊದಲ ಪ್ರಕರಣ ಇದಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 136 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.