ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ? ಎಂಬ ಹೇಳಿಕೆಗೆ ಜಿಲ್ಲೆಯಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ಟಾಂಗ್ ನೀಡಿದ್ದು, ಯಡಿಯೂರಪ್ಪ ಅವರಿಗೆ ಯಾರೂ ಪಾಠ ಹೇಳುವ ಅಗತ್ಯವಿಲ್ಲ. ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಂಡ ನಿರಾಸೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಮುನ್ನವೇ ಅತೀವೃಷ್ಟಿ ಬಗ್ಗೆ ಸಮೀಕ್ಷೆ ನಡೆಸಿದ್ದರು. ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ನಿಧನರಾದ ಹಿನ್ನೆಲೆ ಅಂತಿಮ ದರ್ಶನವನ್ನು ಪಡೆಯಲು ದೆಹಲಿಗೆ ತೆರಳಿದ್ದರು. ದೆಹಲಿಯಿಂದ ಮರಳಿ ಬಂದ ಬಳಿಕ ನೇರವಾಗಿ ಉತ್ತರ ಕರ್ನಾಟಕದ ಅತೀವೃಷ್ಟಿ ಪ್ರದೇಶಗಳಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರಿಗೆ ಯಾರಾ ಬಳಿಯೂ ಹೇಳಿಸಿಕೊಳ್ಳದೇ ಕೆಲಸ ಮಾಡುವ ಗುಣವಿದೆ ಎಂದು ಹೇಳಿದರು.









