ಚಿಕ್ಕಮಗಳೂರು : ಯುವಜನತೆ ವಿದ್ಯಾವಂತರಾಗುವುದರ ಜೊತೆಗೆ ವಿನಯವಂತರೂ ಆಗಬೇಕು : ಕೆ.ನಾಗರಾಜ್.

335
firstsuddi

ಚಿಕ್ಕಮಗಳೂರು : ಯುವಜನತೆ ವಿದ್ಯಾವಂತರಾಗುವುದರ ಜೊತೆಗೆ ವಿನಯವಂತರೂ ಆಗಬೇಕು, ಶ್ರದ್ದೆ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ನಾಗರಾಜ್ ಸಲಹೆ ಮಾಡಿದರು.
ಮಲೆನಾಡು ವಿದ್ಯಾಸಂಸ್ಥೆಯ ಸುಂದರಮ್ಮ ಶಂಕರಮೂರ್ತಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ, ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಬದುಕಿನಲ್ಲಿ ಮುಂದೆ ಬರಬೇಕಾದರೆ ವಿದ್ಯೆ ಇದ್ದರಷ್ಟೇ ಸಾಲದು, ಶ್ರದ್ದೆ, ಶಿಸ್ತು ಮತ್ತು ವಿನಯವೂ ಇರಬೇಕು, ವಿನಯವಿದ್ದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ, ಸೂಕ್ತ ಸ್ಥಾನಮಾನ ನೀಡುತ್ತದೆ ಎಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ನಾಗರೀಕರಾಗುವ ಮೂಲಕ ಕಾಲೇಜಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ಉಪಾಧ್ಯಕ್ಷೆ ರಾಧಾಸುಂದರೇಶ್ ಮಾತನಾಡಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದುದು ಅದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಚಾರ್ಯೆ ಎಂ.ಬಿ.ಜಯಶ್ರೀ ವಾರ್ಷಿಕ ವರದಿಯನ್ನು ಮಂಡಿಸಿದರು, ಸಮಾರೋಪದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು, ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು.
ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು, ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಅಧ್ಯಕ್ಷತೆ ವಹಿಸಿದ್ದರು, ಸಹಕಾರ್ಯದರ್ಶಿ ಎಸ್.ಶಂಕರನಾರಾಯಣ ಭಟ್, ಆಡಳಿತಾಧಿಕಾರಿ ಶಾಂತಕುಮಾರಿ, ದಾನಿ ಉಮಾನಾಗೇಶ್ ಉಪಸ್ಥಿತರಿದ್ದರು.