ಚಿಕ್ಕಮಗಳೂರು : ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರು ಹಾಗೂ ಪೋಷಕರು ರೈಲಿನ ಹಳಿಗಳಂತೆ ಶ್ರಮಿಸಬೇಕು : ಸೀತಮ್ಮ.

278
firstsuddi

ಚಿಕ್ಕಮಗಳೂರು : ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರು ಹಾಗೂ ಪೋಷಕರು ರೈಲಿನ ಹಳಿಗಳಂತೆ ಶ್ರಮಿಸಬೇಕು, ಆಗ ಮಾತ್ರ ಸರ್ಕಾರಿಯ ಮಕ್ಕಳ ವಿದ್ಯಾಭ್ಯಾಸ ಎಂಬ ರೈಲು ನಿಗದಿತ ಗುರಿ ಸಾಧಿಸಲು ಸಾಧ್ಯ ಎಂದು ಆಲ್ದೂರು ಕ್ಲಸ್ಟರ್‍ನ ಚಂಡಿಗೋಡು ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸೀತಮ್ಮ ಅಭಿಪ್ರಾಯಪಟ್ಟರು.
ಅವರು ಇತ್ತಿಚೆಗೆ ಆಲ್ದೂರು ಕ್ಲಸ್ಟರ್‍ನ ಚಂಡಿಗೋಡು ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಶಾಲೆಯಲ್ಲಿ ಮಕ್ಕಳು ಉತ್ತಮವಾಗಿ ಕಲಿಯುತ್ತಿದ್ದು, ಶಿಕ್ಷಕರು ಪ್ರಸ್ತುತ ವಿದ್ಯಾಗಮ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ, ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿಯು ದಾನಿಗಳು ಶಾಲೆಗೆ ಇನ್ನೂ ಹೆಚ್ಚಿನ ಸಹಕಾರ ನೀಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ಯಾನಿಟೈಸರ್ ನೀಡಿ ಮಾತನಾಡಿದ ಮುಖ್ಯ ಶಿಕ್ಷಕಿಯಾದ ವನಜಾಕ್ಷಿ ಎಂ.ಎಂ ರವರು ಈ ಸಾಲಿನಿಂದ ಸರ್ಕಾರವು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದು, ಇದರಿಂದ ಸರ್ಕಾರಿ ಶಾಲೆಗಳ ಕಡೆ ಮಕ್ಕಳು ಮುಖ ಮಾಡುತ್ತಿದ್ದಾರೆ. ಈ ಬಾರಿ 7 ಜನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಊರಿನ ದಾನಿಗಳಾದ ಹಾಗೂ ಶಿಕ್ಷಕರಾದ ಸತೀಶ್ ಕುಮಾರ್, ಚಂದ್ರಶೇಖರ್ ಮತ್ತು ಕುಮಾರ್ ಬಿ.ಎಸ್ ರವರು ಮಕ್ಕಳಿಗೆ ಸಮವಸ್ತ್ರ, ನೋಟ್ ಪುಸ್ತಕ, ಪೆನ್ಸಿಲ್, ನೀಡಿದರಲ್ಲದೆ ಮತ್ತು ಆಶಾ ಕಾರ್ಯಕರ್ತೆಯರಾದ ಅನಿತಾ ಶಾಲಾ ಮಕ್ಕಳಿಗೆ ಮಾಸ್ಕ್ ವಿತರಿಸಿದರು.