ಚಿಕ್ಕಮಗಳೂರು : ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರಿಂದ ಹಲ್ಲೆ…

222
firstsuddi

ಚಿಕ್ಕಮಗಳೂರು : ಸರ್ಕಾರಿ ಅಪರ ಅಭಿಯೋಜಕರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಅಪರಿಚಿತರು ಪರಾರಿಯಾಗಿರುವ ಘಟನೆ ಜಿಲ್ಲೆಯ ತರೀಕೆರೆ ನ್ಯಾಯಾಲಯದ ಹೊರಭಾಗದಲ್ಲಿ ನಡೆದಿದೆ. ಸುರೇಶ್ ಚಂದ್ರ ಹಲ್ಲೆಗೊಳಗಾದ ಅಪರ ಅಭಿಯೋಜಕರು ಎನ್ನಲಾಗಿದ್ದು, ಸುರೇಶ್ ಅವರು ತಮ್ಮ ಕರ್ತವ್ಯವನ್ನು ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತರು ಹಲ್ಲೆ ಮಾಡಿ ಪರಾರಿಯಾಗಿದ್ದು, ಸುರೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.