ಚಿಕ್ಕಮಗಳೂರು : ಸುವರ್ಣ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

140
firstsuddi

ಚಿಕ್ಕಮಗಳೂರು : ನಗರದ ಸುವರ್ಣ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲೆ ಮತ್ತು ತಾಲ್ಲೂಕು ಘಟಕ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಿದವು.
ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆಗಳ ಕಲಿಕೆಯನ್ನು ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕಡ್ಡಾಯಗೊಳಿಸಬೇಕು ಹಾಗಾದರೆ ಮಾತ್ರ ರಾಜ್ಯದಲ್ಲಿ ಕನ್ನಡ ಭಾಷೆ. ನಾಡಿನ ಸಂಸ್ಕೃತಿ ಉಳಿಯುತ್ತದೆ ಎಂದು ಹೇಳಿದರು.
ಸಿಪಿಐ ಮುಖಂಡ ಬಿ.ಅಮ್ಜದ್ ಮಾತನಾಡಿ ಕನ್ನಡ ಭಾಷೆಯ ಜೊತೆಗೆ ನಾಡಿನ ಸಂಸ್ಕೃತಿಯೇ ನಾಶವಾಗುವಂತಹ ಇಂದಿನ ಪರಿಸ್ಥಿತಿಯಲ್ಲಿ ಕನ್ನಡಿಗರು ಆತ್ಮಾವಲೋಕನ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.
ತಾಲ್ಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ, ಖಜಾಂಚಿ ಪ್ರೊ|| ಕೆ.ಎನ್.ಲಕ್ಷ್ಮೀಕಾಂತ್, ಸಂಘಟನಾ ಕಾರ್ಯದರ್ಶಿ ಚಂದ್ರಯ್ಯ, ಸಾಹಿತಿಗಳಾದ ಬಿ.ತಿಪ್ಪೇರುದ್ರಪ್ಪ, ಡಾ|| ಬೆಳವಾಡಿ ಮಂಜುನಾಥ್, ಆಶ್ರಯ ಸಮಿತಿ ಸದಸ್ಯ ಜೇಮ್ಸ್, ಪಿ.ಸಿ.ರಾಜೇಗೌಡ, ರಘು, ರವೀಶ್ ಬಸಪ್ಪ ಉಪಸ್ಥಿತರಿದ್ದರು.