ಚಿಕ್ಕಮಗಳೂರು : ಸ್ತ್ರೀ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಿಲ್ಲದಿದ್ದಲ್ಲಿ ಮಹಿಳಾ ದಿನಾಚರಣೆಗೆ ಅರ್ಥ ಬರುವುದಿಲ್ಲ : ಕೆ.ಟಿ.ರಾಧಾಕೃಷ್ಣ.

130
Firstsuddi

ಚಿಕ್ಕಮಗಳೂರು : ಸ್ತ್ರೀ ಕುಲದ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಿಲ್ಲದಿದ್ದಲ್ಲಿ ಮಹಿಳಾ ದಿನಾಚರಣೆಗೆ ಅರ್ಥ ಬರುವುದಿಲ್ಲ ಎಂದು ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.

ಜಿಲ್ಲಾ ಸಹೋದರತ್ವ ಸಮಿತಿ ನಗರದ ಬಿಎಸ್‍ಪಿ ಕಛೇರಿಯಲ್ಲಿ ನಿನ್ನೆ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹೆಣ್ಣನ್ನು ದೇವರೆಂದು ಪೂಜಿಸುವ ದೇಶ ಮತ್ತು ಸಂಸ್ಕøತಿ ನಮ್ಮದು, ಆದರೆ ಅದಕ್ಕೆ ವಿರುದ್ದವಾಗಿ ಪ್ರತಿನಿತ್ಯ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆಯುತ್ತಿರುವುದು ದಿನೇದಿನೇ ಹೆಚ್ಚುತ್ತಿರುವುದು ರಾಷ್ಟ್ರದ ದುರಂತ ಎಂದು ವಿಷಾದಿಸಿದರು.
ಎಲ್ಲಿಯವರೆಗೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳು ನಿಲ್ಲುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಶ್ರೀಮಂತ ಸಂಸ್ಕøತಿಗೆ ಬೆಲೆ ಬರುವುದಿಲ್ಲ, ಆರೋಗ್ಯವಂತ ಸಮಾಜ ನಿರ್ಮಾಣವಾಗುವುದಿಲ್ಲ ಎಂದ ಅವರು ಈ ಹಿನ್ನೆಲೆಯಲ್ಲಿ ಸ್ತ್ರೀ ಕುಲದ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನೋಬೆಲ್ ಪಿ.ಯು ಕಾಲೇಜಿನ ಕಾರ್ಯದರ್ಶಿ ದೇವತಾ ಹೆಣ್ಣು ಅಬಲೆಯಲ್ಲ, ಅವಳು ಸಬಲೆ ಆದರೆ ಅವಳಲ್ಲಿರುವ ಆಗಾಧ ಶಕ್ತಿಯ ಅರಿವು ಅವಳಿಗಿಲ್ಲ ತಮ್ಮಲ್ಲಿರುವ ಶಕ್ತಿಯನ್ನು ಮಹಿಳೆಯರು ಅರ್ಥ ಮಾಡಿಕೊಂಡರೆ ಅವರು ಏನನ್ನು ಬೇಕಾದರೂ ಸಾಧಿಸಬಹುದು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆದವು, ವಿಜೇತರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು, ಮಹಿಳೆಯರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.

ಬಿಎಸ್‍ಪಿ ಜಿಲ್ಲಾ ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ನಗರಾಧ್ಯಕ್ಷ ಹನುಮಂತರಾಯ, ಜಿಲ್ಲಾ ಸಹೋದರತ್ವ ಸಮಿತಿಯ ಕಾರ್ಯದರ್ಶಿ ಕೆ.ಎಸ್.ಮಂಜುಳಾ, ಪದಾಧಿಕಾರಿಗಳಾದ ಸವಿತಾ, ರೇಖಾ, ಪುಷ್ಪಾ, ಮಂಜುಳಾರಾಜ್, ಜಯಮ್ಮ ಉಪಸ್ಥಿತರಿದ್ದರು.