ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮತ್ತೆ ಹಿಜಾಬ್ ಗದ್ದಲ ಆರಂಭವಾದಂತಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಮುಂಭಾಗದಲ್ಲಿಯೇ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ.
ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಹಿಜಾಬ್ ಧರಿಸಿದ 25 ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿಯ ನಿರ್ದೇಶನದ ಮೇರೆಗೆ ಕಾಲೇಜು ಗೇಟ್ ಮುಂಭಾಗದಲ್ಲಿಯೇ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ನಮ್ಮನ್ನು ಕಾಲೇಜಿನ ಒಳಗೆ ಬಿಡುವಂತೆ ಆಗ್ರಹಿಸಿದ್ದು, ನಮ್ಮ ಮನವಿಗೆ ಕಾಲೇಜು ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ.
ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಆದರೆ, ವಿದ್ಯಾರ್ಥಿನಿಯರು ಮಾತ್ರ ಕಾಲೇಜಿನ ಗೇಟ್ ಮುಂದೆಯೇ ನಿಂತು ಹೋರಾಟ ಮಾಡುತ್ತಿದ್ದಾರೆ.










