ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ…

51
firstsuddi

ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ದೇವಸ್ಥಾನದ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ತಾಲೂಕಿನ ಖಾಂಡ್ಯದಲ್ಲಿ ನಡೆದಿದೆ.

ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.

ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.