ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಕುರಿತು ರಶ್ಮಿಕಾ ಹೇಳಿದ್ದೇನು ಗೊತ್ತಾ?

94
firstsuddi

ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ವೈಯಕ್ತಿಕ ವಿಚಾರವಾಗಿ ಆಗಾಗ ಸುದ್ದಿ ಆಗುತ್ತಾರೆ. ಸದ್ಯ ರಶ್ಮಿಕಾ ಯಾರನ್ನಾದರೂ ಲವ್ ಮಾಡುತ್ತಿದ್ದಾರಾ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಹಾಗಾಗಿ ಕೆಲವು ಸಂದರ್ಶನಗಳಲ್ಲೂ ಅವರಿಗೆ ರಿಲೇಷನ್​ಶಿಪ್ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ಡೇಟಿಂಗ್ ಕುರಿತ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ.

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ಬುದ್ಧಿವಂತಿಕೆಯಿಂದ ಉತ್ತರ ನೀಡಿದ ಅವರು ವಯಸ್ಸು ಮುಖ್ಯವಾಗುವುದಿಲ್ಲ. ವ್ಯಕ್ತಿ ಮುಖ್ಯವಾಗುತ್ತಾರೆ ಎಂದು ರಶ್ಮಿಕಾ ಹೇಳಿದ್ದಾರೆ. ಈ ಜಾಣತನದ ಉತ್ತರಕ್ಕೆ ಅವರ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಸಿನಿಮಾ ಈ ವರ್ಷ ಡಿಸೆಂಬರ್ 17ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಆ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೊತೆ ತೆರೆಹಂಚಿಕೊಂಡಿರುವ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ.