ಚಿತ್ರದುರ್ಗ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ಹತ್ತಕ್ಕೂ ಹೆಚ್ಚು ಗೂಡಂಗಡಿಗಳು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಗಾಂಧಿ ಸರ್ಕಲ್ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 4:30ರ ವೇಳಗೆ ಈ ಘಟನೆ ನಡೆದಿದ್ದು, ಹೂವು, ಹಣ್ಣು, ಪೂಜಾ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಿಂದ ಅಪಾರ ನಷ್ಟವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










