ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ- ಬೈಕ್ ಸವಾರ ಸಾವು…

60
firstsuddi

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಯ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಕುನಗಲಿ ಗ್ರಾಮದ ಬಸವರಾಜಪ್ಪ (68) ಮೃತ ಬೈಕ್ ಸವಾರ. ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಕಂದಾಯ ಸಚಿವರ ಜೊತೆ ತೆರಳಿದ್ದು, ಇವರ ಹಿಂದೆ ಕಟಾರಿಯಾ ಅವರ ಕಾರು ಕೂಡ ಬರುತ್ತಿತ್ತು. ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬರುತ್ತಿದ್ದಂತೆ ಕಾರು ರಿವರ್ಸ್ ತೆಗೆಯುವ ಸಂದರ್ಭ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಬೈಕ್ ಸವಾರ ಬಸವರಾಜಪ್ಪಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮದ್ಯೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರು ಚಾಲಕ ಧನುಷ್ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.