ಚಿತ್ರದುರ್ಗ : ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಸಾವು…

78
firstsuddi

ಚಿತ್ರದುರ್ಗ : ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ದಿವ್ಯ (22) ಮೃತ ಮಹಿಳೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಯಾಗಿದ್ದ ಈಕೆ ಮೂರು ತಿಂಗಳ ಹಿಂದೆ ಪತಿಯನ್ನು ಬಿಟ್ಟು ಪ್ರಿಯಕರ ಮಂಜುನಾಥ್ ಜೊತೆ ತೆರಳಿದ್ದಳು. ಆದರೆ ಕಳೆದ ಕೆಲವು ದಿನಗಳಿಂದ ಜ್ವರ ಬಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ದಿವ್ಯಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ದಿವ್ಯ ಮೈಮೇಲೆ ಬರೆ ಮತ್ತು ಪರಚಿದ ಗಾಯಗಳಿವೆ. ಹೀಗಾಗಿ ಮಂಜುನಾಥ್, ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಮೃತಳ ಪೋಷಕರು ಆರೋಪಿಸುತ್ತಿದ್ದಾರೆ. ಇತ್ತ ಪ್ರಿಯಕರ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ದಿವ್ಯಾಳ ಸಾವಿನಿಂದ ನೊಂದು ವಿಷ ಸೇವಿಸಿದೆ ಎಂದು ಹೇಳುತ್ತಿದ್ದಾನೆ. ಘಟನೆ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.