ಚಿತ್ರದುರ್ಗ : ಮನೆ ಗೋಡೆ ಕುಸಿದು ಬಾಲಕಿ ಸಾವು…

84
firstsuddi

ಚಿತ್ರದುರ್ಗ : ಮನೆಯ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ (11) ಮೃತ ದುರ್ದೈವಿ. ನಿರಂತರ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಮನೆಯಲ್ಲಿ ಮಲಗಿದ್ದ ವೇಳೆ ಹರ್ಷಿತಾ ಸಾವನ್ನಪ್ಪಿದ್ದು, ತಂದೆ ರವಿ(40) ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ತಾಯಿ ಕವಿತಾ(35), ಮತ್ತೋರ್ವ ಪುತ್ರಿ ಅಮೂಲ್ಯ ಅಪಾಯದಿಂದ ಪಾರಾಗಿದ್ದಾರೆ.

ಸದ್ಯ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.