ಚಿದಂಬರಂ ಅವರಂತೆ ಡಿ.ಕೆ. ಶಿವಕುಮಾರ್ ಅವರು ಕೂಡಾ ವಿಚಾರಣೆ ಎದುರಿಸಬೇಕು : ಹೈಕೋರ್ಟ್ ಆದೇಶ…

232
firstsuddi

ಬೆಂಗಳೂರು : ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ. 2017ರಲ್ಲಿ ಡಿ.ಕೆ. ಶಿವಕುಮಾರ್ ಅವರ ದೆಹಲಿಯ ನಿವಾಸದ ಮೇಲೆ ಐಟಿ ದಾಳಿ ನಡೆಸಿದಾಗ ದಾಖಲೆಯಿಲ್ಲದ 8.59 ಕೋಟಿ ರೂ ಹಣ ಪತ್ತೆಯಾಗಿತ್ತು. ಈ ಕುರಿತು ವಿಚಾರಣೆ ವೇಳೆ ಡಿ.ಕೆ. ಶಿವಕುಮಾರ್ ಅವರು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಐಟಿ ಇಲಾಖೆಯು ಡಿಕೆಶಿ ವಿರುದ್ಧ ದೂರು ನೀಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮ್ಮನ್ಸ್ ಜಾರಿ ಮಾಡಿತ್ತು. ಇಡಿ ಸಮ್ಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಡಿಕೆಶಿ ಸೇರಿದಂತೆ ಅವರ ಸ್ನೇಹಿತರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇವರು ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಇಂದು ಪೂರ್ಣಗೊಳಿಸಿದ ನ್ಯಾ. ಅರವಿಂದ್ ಕುಮಾರ್ ಅವರು ಈ ಪ್ರಕರಣ ವಿಚಾರಣೆಗೆ ಯೋಗ್ಯವಾಗಿದೆ. ಚಿದಂಬರಂ ಅವರಂತೆ ಡಿ.ಕೆ. ಶಿವಕುಮಾರ್ ಅವರು ಕೂಡಾ ವಿಚಾರಣೆ ಎದುರಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.