ಚಿರು-ಮೇಘನಾ ಮುದ್ದಾದ ಮಗನ ಹೆಸರು ರಿವೀಲ್ – ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ…

125
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ದಂಪತಿಯ ಮುದ್ದಾದ ಮಗನ ಹೆಸರು ಇಷ್ಟು ದಿನ ಜ್ಯೂನಿಯರ್ ಚಿರು ಎಂದೇ ಫೇಮಸ್ ಆಗಿತ್ತು. ಆದರೆ ಇಂದು ಜ್ಯೂನಿಯರ್ ಚಿರುಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಾಮಕರಣ ಸಮಾರಂಭ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಜ್ಯೂನಿಯರ್ ಚಿರುಗೆ ರಾಯನ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಇಷ್ಟು ದಿನ ಚಿರು ಪುತ್ರನನ್ನು ಚಿಂಟು, ಸಿಂಬಾ, ಪಾಪ ಕುಟ್ಟಿ, ಜೂನಿಯರ್ ಚಿರು, ಜ್ಯೂನಿಯರ್ ಸಿಂಗ ಹೀಗೆ ಹಲವಾರು ಮುದ್ದಾದ ಹೆಸರುಗಳಲ್ಲಿ ಕುಟುಂಬದವರು ಹಾಗೂ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದರು. ಆದರೆ ಇಂದು ಚಿರಂಜೀವಿ ಸರ್ಜಾ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ಹೆಸರಿಡಲಾಗಿದೆ.

ಸೆಪ್ಟೆಂಬರ್ 3ರಂದು ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ರಿವೀಲ್ ಮಾಡುವುದಾಗಿ ಮೇಘನಾ ರಾಜ್ ತಮ್ಮ ಇನ್‍ ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋ ಹಂಚಿಕೊಳ್ಳುವುದರ ಮೂಲಕ ತಿಳಿಸಿದ್ದರು.